ಸುರತ್ಕಲ್: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಕಾನ ಮೈದಗುರಿಯಲ್ಲಿ ನಡೆದಿದೆ.
ಸುರತ್ಕಲ್ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ.
ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ನಾಯಿಗಳ ಹಿಂಡು ಬಾಲಕಿಯ ಮೇಲೆ ದಾಳಿ ಮಾಡಿವೆ. ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಬಾಲಕಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸಾರ್ವಜನಿಕರು ನಾಯಿಗಳ ಬಾಯಿಯಿಂದ ಬಾಲಕಿಯನ್ನು ರಕ್ಷಿಸಿ ಸುರತ್ಕಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ನಗರದ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…