ಸುರತ್ಕಲ್: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಕಾನ ಮೈದಗುರಿಯಲ್ಲಿ ನಡೆದಿದೆ.
ಸುರತ್ಕಲ್ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ.
ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ನಾಯಿಗಳ ಹಿಂಡು ಬಾಲಕಿಯ ಮೇಲೆ ದಾಳಿ ಮಾಡಿವೆ. ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಬಾಲಕಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸಾರ್ವಜನಿಕರು ನಾಯಿಗಳ ಬಾಯಿಯಿಂದ ಬಾಲಕಿಯನ್ನು ರಕ್ಷಿಸಿ ಸುರತ್ಕಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ನಗರದ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…
ಉಡುಪಿ: ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…
ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…
ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…
ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…