Featured

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ

ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು “ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಪ್ರದೇಶವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಈ ಸಂಬಂಧ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ವರದಿ ಕಳುಹಿಸಲಾಗುತ್ತಿದೆ. ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲು ಎಫ್‌ಆರ್‌ಆರ್‌ಒ ಆದೇಶ ಹೊರಡಿಸಲಿದೆ ಹಾಗೂ ಸ್ವದೇಶಕ್ಕೆ ಗಡಿಪಾರು ಮಾಡಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಅಕ್ರಮ ವಲಸಿಗರ ಪತ್ತೆಗಾಗಿ ಕರಾವಳಿ ಭಾಗದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಈ ಕಾರ್ಯಾಚರಣೆ ಮೂಲಕ ಸುರತ್ಕಲ್‌ನಲ್ಲಿ ದಾಖಲೆಗಳಿಲ್ಲದೇ ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆಗೆ ಒಳಪಡಿಸಲಾಗುತ್ತಿದ್ದು, ಎಫ್‌ಆರ್‌ಆರ್‌ಒ ಆದೇಶದ ಬೆನ್ನಲ್ಲೇ ಗಡಿಪಾರು ಪ್ರಕ್ರಿಯೆ ಆರಂಭವಾಗಲಿದೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago