ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸೆ.13 ರಂದು ಸಾಮೂಹಿಕ ಧರಣಿ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸೆ.13 ರಂದು ಸಾಮೂಹಿಕ ಧರಣಿ

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸೆ.13 ರಂದು ಸಾಮೂಹಿಕ ಧರಣಿ ನಡೆಯಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸದಸ್ಯ ಮುನೀರ್‌ ಕಾಟಿಪಳ್ಳ, ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಭರವಸೆಗಳನ್ನು ಕೇಳಿ ಸಾಕಾಗಿದೆ.

ಟೋಲ್ ಗೇಟ್ ತೆರವು ದಿನಾಂಕ‌ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಮುಂಭಾಗ ಸೆ.13 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಸಾಮೂಹಿಕ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ : ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ. ಆಯ್ಕೆ – Vishwanews24

Leave a Reply