ಸುರತ್ಕಲ್: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ.
ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…