ಕುಂದಾಪುರ : ಹತ್ತು ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣಿಕರನ್ನು ಬಲವಂತವಾಗಿ ವಸೂಲಿ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ. ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವಷ೯ಗಳನ್ನು ಅಕ್ರಮವಾಗಿ ಪೂರೈಸಿದೆ.
ಈ ಅವಧಿಯಲ್ಲಿ ಸುರತ್ಕಲ್, ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಸುಂಕ ಸಂಗ್ರಹದ ಹೆಸರನಲ್ಲಿ ವಾಹನ ಸವಾರರಿಂದ ವಸೂಲಿ ಮಾಡಿದ ಮೊತ್ತ ಸರಿ ಸುಮಾರು 400 ಕೋಟಿ ರೂಪಾಯಿ. ಇಷ್ಟಾದರೂ ಆಳುವವರ ಹಣದ ದಾಹ ತಣಿಯುತ್ತಿಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಮಲ್ಪೆ: ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ನಿಂದ ಬಿದ್ದು ಮೀನುಗಾರ ಸಾವು – Vishwanews24
ಕುಂದಾಪುರ ಕಾಮಿ೯ಕ ಭವನದ ಸಬಾಂಗಣದಲ್ಲಿ ಜರುಗಿದ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಏಪ೯ಡಿಸಿದ ಸಿದ್ಧತಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಹೋರಾಟ ಸಮಿತಿಯ ಮುಖಂಡ ಸಹಕಾರಿ ದುರೀಣ ಕೊಳ್ಕೆಬೈಲ್ ಕಿಸನ್ ಹೆಗ್ಡೆ ಮಾತನಾಡಿ, ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ಬಸ್ಸ್ ಮಾಲಕರ ಸಂಘವು ಸಂಪೂಣ೯ ಬೆಂಬಲ ಕೊಡುತ್ತದೆ. ಉಡುಪಿ ಜಿಲ್ಲೆಯ ಬಡ ಮಧ್ಯಮ ವರ್ಗದ ಹಾಗೂ ಟ್ಯಾಕ್ಸಿ ಚಾಲಕರನ್ನು ಟೋಲ್ ಗೇಟ್ ಹಿಂದಿರುವ ಶಕ್ತಿಗಳು ನಿರಂತರ ಶೋಷಿಸುತ್ತಿದೆ. ಈ ಶೋಷಣೆಯ ನಾಂದಿಗೆ ನೂರಾರು ಮಂದಿ ಜಿಲ್ಲೆಯಿಂದ ಭಾಗವಹಿಸುವಂತೆ ಕರೆ ನೀಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ ಕಲ್ಲಾಗರ, ಚಂದ್ರಶೇಖರ.ವಿ. ರಮೇಶ್.ವಿ.ರಾಜು ದೇವಾಡಿಗ ರವಿ.ವಿ.ಎಂ.,ದಲಿತ ಸಂಘಷ೯ ಸಮಿತಿ ಮುಖಂಡ ನಾಗರಾಜ, ಶ್ರೀನಿವಾಸ ಮಲ್ಯಾಡಿ, ಶ್ರೀನಾಥ ಕುಲಾಲ್, ಗಣೇಶ ಮೆಂಡನ್ ಬಾಲಕೃಷ್ಢ ಎಂ. ವೆಂಕಟೇಶ್ ಕೋಣಿ ಮತ್ತು ಇತರ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಟೋಲ್ ಗೇಟ್ ಮುತ್ತಿಗೆ ನೇರ ಕಾಯಾ೯ಚರಣೆಯ ಅಂಗವಾಗಿ ಕುಂದಾಪುರ ಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಜಾಥಾ ನಡೆಸಲು ನಿಧ೯ರಿಸಲಾಯಿತು. ಇಂಟಕ್ ಮುಖಂಡ ಲಕ್ಷ್ಮಣ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…