ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಾಗಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ.
ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೂಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದು, ಸ್ಯಾನಿಂಗ್‌ಗೆ ಒಳಗಾಗಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ.
ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ, ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…