ಸುರತ್ಕಲ್: ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಈಜಾಡಲು ನೀರಿಗೆ ಇಳಿದಿದ್ದು, ಈ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಒಬ್ಬರನ್ನು ರಕ್ಷಿಸಿದ ಘಟನೆ ಜ.8ರ ಬುಧವಾರ ಇಲ್ಲಿನ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಸಂಭವಿಸಿದೆ.
ಬೆಂಗಳೂರು ಜೆಪಿನಗರ ನಿವಾಸಿ ಸತ್ಯವೇಲು (30), ಶಿವಮೊಗ್ಗದ ಶಿವಕುಮಾರ್, ಚಿತ್ರದುರ್ಗ ಜಿಲ್ಲೆಯ ಗುಳಿ ಹೊಸಹಳ್ಳಿ, ಉಪ್ಪರಿಗೇನಹಳ್ಳಿಯ ಶಿವಲಿಂಗಪ್ಪ ಅವರ ಪುತ್ರ ಮಂಜುನಾಥ್. ಎಸ್ (31) ಮೃತಪಟ್ಟವರಾಗಿದ್ದು, ಬೀದರ್ ಜಿಲ್ಲೆಯ ಹಂಗಾರಗಾದ ವಿಶ್ವಂಬರ್ ಅವರ ಪುತ್ರ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇವರಲ್ಲಿ ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ದೊರಕಿದ್ದು, ಮಂಜುನಾಥ್ ಅವರ ಮೃತದೇಹಕ್ಕಾಗಿ ಪತ್ತೆ ಕಾರ್ಯ ಮುಂದುವರೆದಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬೀಚ್ ನ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವುದು.
ಮೃತದೇಹಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…