Featured

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ತನ್ನ ಪೋಷಕರೊಂದಿಗೆ ಸುಭಾಷಿತ ನಗರದ ವಸತಿ ಸಮುಚ್ಚಯವೊಂದರ ಎರಡನೇ ಅಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಪೊಲೀಸ್ ಮೂಲಗಳ ಪ್ರಕಾರ, ಮಹಾಲಕ್ಷ್ಮೀ ಅವರು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಂಗಳವಾರ ತಂದೆ-ತಾಯಿಯ ಜೊತೆ ಸೇರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮನೆಗೆ ಮರಳಿದ್ದರು. ದೇವಸ್ಥಾನದಿಂದ ವಾಪಸ್ ಬಂದ ಕೆಲವೇ ಸಮಯದ ಬಳಿಕ, ಪೋಷಕರು ಮನೆಯಲ್ಲಿದ್ದಾಗಲೇ ಮಹಾಲಕ್ಷ್ಮೀ ಏಕಾಏಕಿ ಅಪಾರ್ಟ್‌ಮೆಂಟ್‌ನ 5ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಭವಿಸಿದ ತಕ್ಷಣ ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೋಷಕರು ನೀಡಿದ ಅಧಿಕೃತ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago