Featured

ಸುರತ್ಕಲ್: ಎನ್ಐಟಿಕೆ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ ; ಕಾನೂನುಬಾಹಿರ ಟೋಲ್ ರದ್ದುಪಡಿಸುವಂತೆ ಆಗ್ರಹ – Vishwanews24

ಸುರತ್ಕಲ್: ಎನ್ಐಟಿಕೆ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ ; ಕಾನೂನುಬಾಹಿರ ಟೋಲ್ ರದ್ದುಪಡಿಸುವಂತೆ ಆಗ್ರಹ – Vishwanews24

ಸುರತ್ಕಲ್: ಅನಧಿಕೃತ ಎನ್ ಐಟಿಕೆ ಟೋಲ್ ಗೇಟ್ ವಿರುದ್ಧ ಸಮಾಜ ಸೇವಕ ಆಸೀಫ್ ಆಪತ್ಬಾಂಧವ ಅವರು ಟೋಲ್ ಸಮೀಪ ಅಹೋರಾತ್ರಿ ಧರಣಿ ಕೂತಿದ್ದು ವಿವಿಧ ಸಮಾಜಸೇವಾ ಸಂಘಟನೆಗಳು ಬೆಂಬಲಕ್ಕೆ ನಿಂತಿವೆ.

ಸೋಮವಾರ ಮುಂಜಾನೆ ಧರಣಿ ಪ್ರಾರಂಭವಾಗಿದ್ದು ಈ ವೇಳೆ ಮಾತಾಡಿದ ಆಸೀಫ್ ಅವರು, “ಕೆಲವೇ ಕಿ.ಮೀ. ಅಂತರದಲ್ಲಿ ಎನ್ಐ ಟಿಕೆ ಮತ್ತು ಹೆಜಮಾಡಿ ಟೋಲ್ ಗೇಟ್ ಗಳನ್ನು ಹೆದ್ದಾರಿ ಪ್ರಾಧಿಕಾರ ನಿರ್ಮಾಣ ಮಾಡಿದ್ದು ಇದರಿಂದ ಜನಸಾಮಾನ್ಯರಿಗೆ ತೀರಾ ಸಮಸ್ಯೆಯಾಗುತ್ತಿದೆ. ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಳೆದ ಹಲವು ಸಮಯಗಳಿಂದ ಎನ್ಐಟಿಕೆ ಟೋಲ್ ಗೇಟ್ ರದ್ದಾಗುತ್ತದೆ ಎಂದು ಹೇಳಿಕೊಂಡೇ ಬರುತ್ತಿದ್ದಾರೆ. ಆದರೆ ಇಲ್ಲಿನ ಟೋಲ್ ಮಾತ್ರ ಮುಚ್ಚಿಲ್ಲ. ನಾನು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿದಂತೆಯೇ ಇಲ್ಲಿನ ಟೋಲ್ ವಿರುದ್ಧ ಅಹೋರಾತ್ರಿ ಹೋರಾಟಕ್ಕೆ ಇಳಿದಿದ್ದೇನೆ. ಟೋಲ್ ರದ್ದಾಗದ ಹೊರತು ಇಲ್ಲಿಂದ ವಾಪಾಸ್ ಹೋಗುವುದಿಲ್ಲ. ಎಂದರು

ಅವರು ಮಾತನಾಡಿ ಟೋಲ್ ಕಾರ್ಮಿಕರ ಗೂಂಡಾಗಿರಿ ಮಿತಿಮೀರಿದ್ದು ಕೂಡಲೇ ಇಲ್ಲಿನ ಟೋಲ್ ಗೇಟ್ ರದ್ದು ಪಡಿಸಿ ಜನರನ್ನು ನೆಮ್ಮದಿಯಿಂದ ಉಸಿರಾಡಲು ಬಿಡಿ” ಎಂದು ಅಗ್ರಹಿಸಿದರು.

ಧರಣಿಯಲ್ಲಿ ಪಾಲ್ಗೊಂಡ ಮುಲ್ಕಿ ನಾಗರಿಕ ಹೋರಾಟ ಸಮಿತಿಯ ಹರೀಶ್ ಪುತ್ರನ್ ಕಾನೂನುಬಾಹಿರ ಟೋಲ್ ರದ್ದುಪಡಿಸುವಂತೆ ಆಗ್ರಹಿಸಿ ದರು

ಎಸ್ ಡಿಪಿಐ ಮೂಲ್ಕಿ ಮೂಡಬಿದ್ರೆ ವಲಯ ಅಧ್ಯಕ್ಷ ಅಶ್ರಫ್ ಕೋಟೆಬಾಗಿಲು, ರಿಲಯನ್ಸ್ ಬೊಳ್ಳೂರು ಸಂಘಟನೆ ಮುಖಂಡ ಹಾರಿಸ್ ಇಂದಿರಾನಗರ, ಲಾರಿ ಮಾಲಕರ ಸಂಘದ ಅಧ್ಯಕ್ಷ ಸುಶಾಂತ್ ಶೆಟ್ಟಿ, ಕರವೇ ಜಿಲ್ಲಾಧ್ಯಕ್ಷ ಮನ್ಸೂರ್ ಅಹ್ಮದ್, ಸಮಾಜ ಸೇವಕ ನಿಜಾಮ್ ಪಡುಬಿದ್ರೆ, ಜೆ. ಶ್ರೀಯಾನ್, ಪ್ರಶಾಂತ್ ಕಾಂಚನ್ ಕೊಲ್ನಾಡ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago