ಮಂಗಳೂರು: ಸುರತ್ಕಲ್ ಸಮೀಪದ ಎನ್‌ಐಟಿಕೆ ಟೋಲ್‌ಗೇಟ್‌ನಲ್ಲಿ ಟೋಲ್ ಹಣ ನೀಡದೇ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ನಿವಾಸಿ, ಕಾರು ಚಾಲಕ ರಫೀಕ್ (36) ಬಂಧಿತ ಆರೋಪಿ.
ಗುರುವಾರ ಮಧ್ಯಾಹ್ನ 12:40ಕ್ಕೆ ಸುರತ್ಕಲ್ ಠಾಣೆ ವ್ಯಾಪ್ತಿಯ ಎನ್‌ಐಟಿಕೆ ಟೋಲ್‌ಗೇಟ್‌ನಲ್ಲಿ ಸುರತ್ಕಲ್ ಕಡೆಯಿಂದ ಬಂದ ಕೇರಳದ ಪಾಸಿಂಗ್‌ನ ಕಾರು ಚಾಲಕನು ಟೋಲ್ ನೀಡಲು ನಿರಾಕರಿಸಿದ್ದಾನೆ. ಅಲ್ಲದೆ, ಟೋಲ್ ಸಿಬ್ಬಂದಿ ಮಹಿಳೆ ಜತೆ ವಾದಕ್ಕಿಳಿದಿದ್ದಾನೆ. ಈ ವೇಳೆ ಮತ್ತೋರ್ವ ಸಿಬ್ಬಂದಿ ಯಜ್ಞೇಶ್ ಕರ್ಕೇರಾ ಆರೋಪಿಯಲ್ಲಿ ಟೋಲ್ ಹಣ ನೀಡುವಂತೆ ಕೇಳಿದ್ದು, ಆರೋಪಿಯು ಕಾರಿನ ಒಳಗಿನಿಂದ ಪಿಸ್ತೂಲ್ ತೆಗೆದು, ‘ತಾಕತ್ತಿದ್ದರೆ ತೆಗೆದುಕೊ, ಹತ್ತಿರ ಬಂದರೆ ಕೊಂದು ಹಾಕುತ್ತೇನೆ’ ಎಂದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 (2) (ಜೀವ ಬೆದರಿಕೆ) ಮತ್ತು ಕಲಂ 25ರ ಇಂಡಿಯನ್ ಆರ್ಮ್ಸ್ ಆಯಕ್ಟ್‌ನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡಲೇ ಕಾರ್ಯ ಪ್ರವೃತ್ತರಾದ ಸುರತ್ಕಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಕಾರು ಮತ್ತು ಕೃತ್ಯಕ್ಕೆ ಬಳಸಿದ ಪಿಸ್ತೂಲ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…