Featured

ಸುರತ್ಕಲ್: ಒಟ್ಟಿಗೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ ;  ಐವರ ಬಂಧನ -Vishwanews24

ಸುರತ್ಕಲ್: ಒಟ್ಟಿಗೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ ;  ಐವರ ಬಂಧನ -Vishwanews24

ಸುರತ್ಕಲ್: ವಾಹನದಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಕೆಲವು ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎನ್ನಲಾದ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿ ಹರಿದಾಡುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

ವೀಡಿಯೊದಲ್ಲಿ, ಗುಂಪೊಂದು ಕಾರನ್ನು ಕೂತಿರುವ ತಂಡಕ್ಕೆ ಕೆಲವರನ್ನು ಅಶ್ಲೀಲ ಪದಗಳಿಂದ ನಿಂದಿಸುತ್ತಿರುವುದು ಗೋಚರಿಸುತ್ತದೆ.

ಸುರತ್ಕಲ್ ಟೋಲ್ ಗೇಟ್ ಬಳಿ ಭಾನುವಾರ ಸೆಪ್ಟೆಂಬರ್ 26 ರ ಸಂಜೆ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ನೈತಿಕ ಪೊಲೀಸ್ ಗಿರಿ ಈ ಘಟನೆಗೆ ಸಂಬಂಧಿಸಿ, ಸುರತ್ಕಲ್ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ.

ದೇರಳಕಟ್ಟೆಯ ಕಾಲೇಜಿನ ವಿದ್ಯಾರ್ಥಿನಿಯರು ಬೇರೆ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳೊಂದಿಗೆ ಸಂಚರಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಪರಿಷ್ಕೃತ ವರದಿ :

ಸುರತ್ಕಲ್ ಟೋಲ್ ಬೂತ್ ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ ಸವಿಯೊ ಟಿ ಅಲೋನ್ಸೊ (20) ಸಲ್ಲಿಸಿದ ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 341, 323 ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿ ಪ್ರೀತಂ ಶೆಟ್ಟಿ, ಬಜರಂಗದಳದ ಜಿಲ್ಲಾ ಪ್ರಮುಖ್ ಅರ್ಶಿತ್, ಬಜರಂಗದಳದ ಪ್ರಖಂಡ ಪ್ರಮುಖ್, ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್ ಅವರನ್ನು ಬಂಧಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago