ಸುರತ್ಕಲ್: ನಗರದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂತೋಷ್ ಕುಮಾರ್(43) ಎಂಬವರು ಕಾಣೆಯಾಗಿದ್ದು, ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ವರ್ಷಗಳ ಹಿಂದೆ ಪರಿಚಿತನಾದ ದೀಪಿತ್ ಎಂಬವನೊಂದಿಗೆ ಮೂರು ತಿಂಗಳ ಹಿಂದೆ ಚಿಕ್ಕ ಗಲಾಟೆಯಾಗಿದ್ದು, ಈ ವಿಷಯದಲ್ಲಿ ಸಂತೋಷ ಕುಮಾರ್‍ರವರು ಮನಸ್ತಾಪ ಮಾಡಿಕೊಂಡಿದ್ದರು. ನವೆಂಬರ್ 7 ರಂದು ಮನೆ ಬಿಟ್ಟು ಹೋಗಿ ಅಣ್ಣನಿಗೆ ವ್ಯಾಟ್ಸ್‍ಆಪ್ ಮೂಲಕ “ಅಣ್ಣ ನನ್ನನ್ನು ಕ್ಷಮಿಸು ತಾಯಿಯನ್ನು ಚೆನ್ನಾಗಿ ನೋಡಿಕೊ ತಾನು ಸಾಯುವ ನಿರ್ಧಾರ ಮಾಡಿರುವುದಾಗಿ ತನ್ನ ಸಾವಿಗೆ ದೀಪಿತ್ ಮತ್ತು ಮಹೇಂದ್ರ” ರವರು ಕಾರಣ ಎಂದು ಮೇಸೆಜ್ ಮಾಡಿದ್ದು, ನಂತರ ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ.
ಕಾಣೆಯಾದವರ ಚಹರೆ: ಎತ್ತರ: 6.3 ಅಡಿ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಕೂದಲು ಹೊಂದಿರುತ್ತಾರೆ. ಕಾಣೆಯಾದ ದಿನ ಸ್ಕೈ ಬ್ಲ್ಯೂ ತುಂಬು ತೋಳಿನ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…