ಸುರತ್ಕಲ್: ಕೊರೊನಾ ಸೋಂಕು ತಗುಲಿದೆ ಎಂಬ ಆತಂಕದಲ್ಲಿ ದಂಪತಿಗಳಿಬ್ಬರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಪ್ ಧ್ವನಿ ಮುದ್ರಣ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಕುಳಾಯಿ ಚಿತ್ರಾಪುರ ಎಂಬಲ್ಲಿ ನಡೆದಿದೆ.
ಪಡುಬಿದ್ರಿ ನಿವಾಸಿ ಉದ್ಯಮಿ ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಅವರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಾಪ್ ಧ್ವನಿ ಮುದ್ರಣ ಕಳುಹಿಸಿದ್ದರು. ಶಶಿಕುಮಾರ್ ಅವರು ಕೂಡಲೇ ಕಾರ್ಯ ಪೃವೃತ್ತರಾಗಿ ಸ್ಥಳಕ್ಕೆ ಪೊಲೀಸ್ ಪಡೆಯನ್ನು ಕಳುಹಿಸಿದರು. ಆದರೆ ಅದಾಗಲೇ ದಂಪತಿ ನೇಣಿಗೆ ಶರಣಾಗಿದ್ದರು ಎಂದು ತಿಳಿದುಬಂದಿದೆ.
‘ನನ್ನ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ಭಯ ಆಗುತ್ತಿದೆ. ನನ್ನ ಗಂಡನಿಗೂ ಮೂರು ದಿನದಿಂದ ಕೋವಿಡ್ ಲಕ್ಷಣಗಳು ಕಾಣಿಸಿದ್ದು, ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ನಾನು ಮತ್ತು ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್ ಪಂಪ್ ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ನಮ್ಮ ಅಂತ್ಯಕ್ರಿಯೆಯನ್ನು ನಡೆಸಬೇಕು. ಅದಕ್ಕಾಗಿ ಒಂದು ಲಕ್ಷ ರೂ. ಇಟ್ಟಿದ್ದೇವೆ’ ಎಂದು ಪತ್ನಿ ಗುಣವತಿ ಸುವರ್ಣ ಡೆತ್ ನೋಟ್ ಬರೆದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…