ಸುರತ್ಕಲ್ :ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ವರದಿಯಾಗಿದೆ.
ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಕ ಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.
ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ಬೆಂಕಿ ಅವಘಡದಲ್ಲಿ ಸಾವು ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿಲ್ಲ.
ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…