ಸುರತ್ಕಲ್ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ. ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…