ಸುರತ್ಕಲ್ : ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೈಕಂಬ ಕಿನ್ನಿಕಂಬಳ ನಿವಾಸಿ ಪುನೀತ್(29 ) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 4ಕ್ಕೆ ಏರಿದೆ.
ಆಗಸ್ಟ್ 31 ರಂದು ಕಳವಾರಿನಲ್ಲಿ ಗಲಾಟೆ ನಡೆದು ಕಳವಾರು ನಿವಾಸಿ ಗಂಟೆ ರಿಯಾಝ್ ಎಂಬಾತನ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾತನಾಡಲಿದೆ ಎಂದು ಕರೆಸಿ ಆರೋಪಿಗಳು ಅಬ್ದುಲ್ ಸಫ್ವಾನ್ ಗೆ ಡ್ರಾಗರ್ ಹಾಗೂ ಚೂರಿಯಲ್ಲಿ ಇರಿದು ಗಾಯಗೊಳಿಸಿದ್ದರು. ಈಗಾಗಲೇ ಪ್ರಮುಖ ಅರೋಪಿ ಪ್ರಶಾಂತ್ ಯಾನೆ ಪಚ್ಚು, ಕಳವಾರು ಆಶ್ರಯ ಕಾಲನಿ ನಿವಾಸಿ ಧನರಾಜ್ ಮತ್ತು ಕಳವಾರು ಚರ್ಚ್ ಗುಡ್ಡೆ ಸೈಟ್ ನಿವಾಸಿ ಯಜ್ಞೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…