ಮಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ತಿರುಕನೋರ್ವ ಊರಮುಂದೆ ಕನಸು ಕಾಣುತ್ತಿದ್ದನು. ನಾವು ಶಾಲೆಗೆ ಹೋಗುವಾಗ ಈ ಪದ್ಯ ಕೇಳಿದ್ದೇವೆ. ಆ ಹಾಡಿನಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗುತ್ತದೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ಮುಖ್ಯಮಂತ್ರಿ ಆಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಇಂತಹ ಕೃತ್ಯದಿಂದ ರಾಜಕೀಯ ಲಾಭ ಪಡೆಯುತ್ತದೆ. ಕಟ್ಟುನಿಟ್ಟಿನ ಕ್ರಮ ನಮ್ಮ ಸರಕಾರ ಕೈಗೊಳ್ಳುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದರು.
ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ನಾವು ಅವರ ಜೊತೆ ಮಾತುಕತೆ ಮಾಡುತ್ತೇವೆ. ಶ್ರೀರಾಮುಲು ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಶ್ರೀರಾಮುಲು ಜನಾರ್ದನ ರೆಡ್ಡಿ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಇನ್ನು ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಹಲವಾರು ಯೋಜನೆ ಯೋಜನೆಗಳು ಇವೆ. ಹತ್ತಾರು ಪಾರ್ಟಿ ಹಿಂದೆಯೂ ಬಂದಿದೆ ಮುಂದೆ ಯೂ ಬರುತ್ತದೆ. ಬಿಜೆಪಿಗೆ ಯಾವುದೇ ಲಾಸ್ ಇಲ್ಲ. ಬಿಜೆಪಿ ದೇಶದ ನಂಬರ್ 1 ಪಾರ್ಟಿ. ನಾವು ಕಾಂಗ್ರೆಸ್ ನಂತಹ ಪಾರ್ಟಿಯನ್ನೇ ಎದುರಿಸಿ ಬಂದವರು. ನಮ್ಮ ಎಲ್ಲಾ ಹಿರಿಯರು ಮಾತುಕತೆ ಮಾಡುತ್ತಾರೆ, ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…