Featured

ಸುರತ್ಕಲ್ ಜಲೀಲ್ ಹತ್ಯೆ: ಅಮಾಯಕರ ಕೊಲೆ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಅಕ್ಷಿತ್ ಸುವರ್ಣ – Vishwanews24

ಸುರತ್ಕಲ್ ಜಲೀಲ್ ಹತ್ಯೆ: ಅಮಾಯಕರ ಕೊಲೆ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಅಕ್ಷಿತ್ ಸುವರ್ಣ

ಮಂಗಳೂರು: ಕ್ಷುಲ್ಲಕ ಕಾರಣಗಳಿಗಾಗಿ ದಕ ಜಿಲ್ಲೆಯಲ್ಲಿ ಅಮಾಯಕರನ್ನು ಕೊಲೆಗೈಯ್ಯುತ್ತಿರುವುದು ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.

ಸುರತ್ಕಲ್ ನಲ್ಲಿ ಅಂಗಡಿ ನಡೆಸಿಕೊಂಡಿದ್ದ ಅಮಾಯಕ ಜಲೀಲ್ ಅವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆಗೈದಿರುವುದು ಖಂಡನಾರ್ಹವಾಗಿದೆ. ಅಮಾಯಕರನ್ನು ಗುರಿಯಾಗಿಸಿ ಕೊಲೆ ಮಾಡುತ್ತಿರುವ ದುಷ್ಕರ್ಮಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಆರೋಪಿಗಳು ಯಾವುದೇ ಧರ್ಮ ಜಾತಿ, ಪಕ್ಷಕ್ಕೆ ಸೇರಿದ್ದರೂ ಕೂಡ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು.

ದಕ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನೈತಿಕ ಪೊಲೀಸ್ ಗಿರಿ, ಕೊಲೆಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದ್ದು ಆಳುವ ಪಕ್ಷ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಶಿಕ್ಷಣಕ್ಕೆ ಹೆಸರಾದ ಜಿಲ್ಲೆಗೆ ಬೇರೆ ರಾಜ್ಯ ದೇಶದಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ಇಂತಹ ಘಟನೆಗಳಿಂದ ಇಲ್ಲಿ ವಾಸ ಮಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಇಲಾಖೆ ಜನರಲ್ಲಿ ಧ್ಯೇರ್ಯ ಮೂಡಿಸುವ ಕೆಲಸ ಮಾಡಬೇಕಾಗಿದೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾದೀತು. ಈ ನಿಟ್ಟಿನಲ್ಲಿ ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿ ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಅವರು ಆಗ್ರಹಿಸಿದ್ದಾರೆ

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago