ಮಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಪ್ರಚೋದಿತ ಕೊಲೆಗಳು, ಅನೈತಿಕ ಪೊಲೀಸ್ ಗಿರಿ, ಕೋಮು ವೈಷಮ್ಯಗಳು ಹೆಚ್ಚಾಗುತ್ತಾ ಇವೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆರೋಪಿಸಿದೆ.
ಚುನಾಯಿತ ಪ್ರತಿನಿಧಿಗಳ ತಾರತಮ್ಯ ನೀತಿ, ಪೊಲೀಸರ ನಿರ್ಲಕ್ಷ್ಯ ಧೋರಣೆಗಳಿಂದಾಗಿ, ಶೋಷಿತ ವರ್ಗದ ಜನರಿಗೆ ವ್ಯವಸ್ಥೆಯ ಮೇಲೆ ಭರವಸೆ ಇಲ್ಲದಂತಾಗಿದೆ. ಹಿಂದಿನ ಕೊಲೆ ಪ್ರಕರಣಗಳಲ್ಲಿನ ನ್ಯಾಯದ ಮರೀಚಿಕೆ ಹಾಗೂ ಸರಕಾರದ ಫ್ಯಾಶಿಸ್ಟ್ ಧೋರಣೆ ಇಂದು ಸುರತ್ಕಲ್’ನಲ್ಲಿ ಕೃಷ್ಣಾಪುರ ನಿವಾಸಿ ಜಲೀಲ್ ಅವರ ಅಮಾನುಷ ಕೊಲೆಗೆ ಮುಖ್ಯ ಕಾರಣ. ಇದರಿಂದ ಇನ್ನಷ್ಟು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲು ಅಪರಾಧಿಗಳ ಆತ್ಮಸ್ಥೈರ್ಯ ಹೆಚ್ಚುವುದರಲ್ಲಿ ಸಂಶಯವಿಲ್ಲ ಎಂದು ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಶಾಂತಿ – ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೇ ಜಲೀಲ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಝಹನಾ ಬಂಟ್ವಾಳ ಆಗ್ರಹಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…