Featured

ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ – Vishwanews24

ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು: ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.

ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್’ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ನೀಡುವುದಿಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ, ಹೆಚ್ಚಿನ ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕೊಲೆಗೆ ಕಾರಣ ಏನು ಎನ್ನುವುದನ್ನು ಪೂರ್ಣ ತನಿಖೆ ಬಳಿಕ ತಿಳಿಸಲಾಗುವುದು. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದು, 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಶಶಿಕುಮಾರ್ ತಿಳಿಸಿದರು.

ಜಲೀಲ್ ಕೇಸ್’ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು ಮೂವರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಹೇಳಿದರು.

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

3 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

26 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

37 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

50 minutes ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

56 minutes ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago