ನವದೆಹಲಿ : ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು .
ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ / ವಿಲೀನಗೊಳಿಸುವ ಬಗ್ಗೆ ಚರ್ಚಿಸಲಾಯಿತು . ಅದರಂತೆ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿರುವ ದೃಷ್ಠಿಯಿಂದ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಿಸಿ ಎನ್.ಎಂ.ಪಿ.ಟಿ ಒಳಗೆ ಸ್ಥಾಪಿಸುವ ನಿರ್ಧಾರಕ್ಕೆ ಬರಲಾಯಿತು . ಎನ್.ಎಂ.ಪಿ.ಟಿಯ ಒಳಗೆ ಬರುವ ಹಾಗೂ ಹೊರಗೆ ಹೋಗುವ ವಾಹನಗಳಿಂದ ಮಾತ್ರ ಟೋಲ್ ಸಂಗ್ರಹಿಸಲು ಸಚಿವರು ಸೂಚಿಸಿರು ಅಲ್ಲದೇ ` ಮಾಣಿ – ಸಂಪಾಜೆ – ಮಡಿಕೇರಿ ಸಂಪರ್ಕಿಸುವ ರಸ್ತೆಯನ್ನು ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಹಾಗೂ ಸಂಪಾಜೆಯಿಂದ ಮಡಿಕೇರಿವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ಬಗ್ಗೆ ಸಭೆಯಲ್ಲಿ ಸಚಿವರು ಆದೇಶಿಸಿದರು .
ಈ ಸಭೆಯಲ್ಲಿ ಆರ್ ಕೆ ಪಾಂಡೆ , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸದಸ್ಯರು , ಗೋ ಸಾಹೇಲ್ ಹೆಚ್ಚುವರಿ ಕಾರ್ಯದರ್ಶಿ , ಹಾಗೂ ಮಹಾವೀರ್ ಸಿಂಗ್ ಸದಸ್ಯರು ರಾಷ್ಟ್ರೀಯ ಹೆದ್ದಾರಿ ( ಟೋಲ್ ವಿಭಾಗ ) ಹಾಗೂ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್ , ಮೈಸೂರು ಸಂಸದ ಪ್ರತಾಪ್ ಸಿಂಹ , ಕೋಲಾರ ಸಂಸದರ ಶ್ರೀ ಮುನಿಸ್ವಾಮಿ ಉಪಸ್ಥಿತರಿದ್ದರು .
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…