Featured

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್ – Vishwanews24

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್

ಸುರತ್ಕಲ್‌: ಇಲ್ಲಿನ ಎನ್‌ಐಟಿಕೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಜನರಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹಾಗೂ ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ.

2022ರ ನವೆಂಬರ್‌ನಲ್ಲಿ ಟೋಲ್ ಗೇಟ್ ತೆರವು ಹೋರಾಟ ಸಮಿತಿಯು ಟೋಲ್ ಗೇಟ್ ತೆರವಿಗಾಗಿ ನೇರ ಕಾರ್ಯಾಚಣೆಗೆ ಕರೆ ನೀಡಿತ್ತು. ಈ ಹಿನ್ನೆಲೆ ಸಾವಿರಾರು ಹೋರಾಟಗಾರರು ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದರು. ಈ ಸಂದರ್ಭ 250 ಕ್ಕೂ ಅಧಿಕ ಹೋರಾಟಗಾರರನ್ನು ಬಂಧಿಸಲಾಗಿತ್ತು.

ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಸೇರಿ ಒಟ್ಟು 101 ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಇವರೆಲ್ಲರ ವಿರುದ್ಧ 2023ರ ಅಕ್ಟೋಬರ್‌ನಲ್ಲಿ ಸುರತ್ಕಲ್ ಪೊಲೀಸರು ಮಂಗಳೂರು ಜೆಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಈ 101 ಜನ ಹೋರಾಟಗಾರರು ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಲಾಗಿದೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

30 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

39 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 hour ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago