ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು, ಇಲ್ಲವಾದಲ್ಲಿ ರಾಜಿನಾಮೆ ನೀಡಿ ಎಂದು ಸಂಸದ ಹಾಗೂ ಶಾಸಕರಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮೀತಿ ಒತ್ತಾಯಿಸಿದೆ.
ಈ ಬಗ್ಗೆ ಇಂದು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಅವರು, ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ನೀಡಿರುವ ಗಡುವು ಮುಗಿಯಲು ಕೆಲವೇ ದಿನಗಳು ಬಾಕಿ ಇದ್ದು, ಟೋಲ್ ಗೇಟ್ ತೆರವುಗೊಳಿಸಬೇಕು, ಇಲ್ಲವಾದಲ್ಲಿ ಸ್ಥಳೀಯ ಸಂಸದ ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಹಾಗೂ ಆರು ತಿಂಗಳ ಅವಧಿಗೆ ತಾತ್ಕಾಲಿಕ ನೆಲೆಯಲ್ಲಿ ಆರಂಭವಾಗಿದ್ದ ಸುರತ್ಕಲ್ ಟೋಲ್ ಕೇಂದ್ರವು ಏಳು ವರ್ಷಗಳಿಂದ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದೆ. ಈ ಬಾರಿ ನಿಗದಿತ ಅವಧಿಯಲ್ಲಿ ಕೇಂದ್ರ ಮುಚ್ಚದಿದ್ದರೆ, ಹೋರಾಟ ಸಮಿತಿ ವತಿಯಿಂದ ಟೋಲ್ ಮುತ್ತಿಗೆ ಕಾರ್ಯಕ್ರಮ ನಡೆಸಲಾಗುವುದು ಮತ್ತು ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
60 ಕಿ.ಮೀ. ಒಳಗಿರುವ ಎಲ್ಲ ಟೋಲ್ ಸಂಗ್ರಹ ಕೇಂದ್ರಗಳನ್ನು 90 ದಿನಗಳ ಒಳಗೆ ತೆರವುಗೊಳಿಸುವುದಾಗಿ ಹೇಳಿದ್ದ ಕೇಂದ್ರ ಸಚಿವರ ಹೇಳಿಕೆಯನ್ನು ಸ್ಥಳೀಯ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ. ವೈ. ಭರತ್ ಶೆಟ್ಟಿ ಪುನರುಚ್ಚರಿಸಿದ್ದರು. ಜೂ.22ಕ್ಕೆ ಅವರು ಹೇಳಿರುವ 90 ದಿನಗಳು ಪೂರ್ಣಗೊಳ್ಳುತ್ತದೆ. ಆದರೆ, ಟೋಲ್ ಕೇಂದ್ರ ತೆರವಿಗೆ ಸಂಬಂಧಿಸಿ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ ಎಂದರು.
ಇದೇ ವೇಳೆ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರು ಹಣ ಪಡೆದಿದ್ದಾರೆ ಎಂಬ ಶಾಸಕ ಭರತ್ ಶೆಟ್ಟಿ ಅವರ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರು ಸಾಕ್ಷ್ಯಸಮೇತ ಆರೋಪ ಮಾಡಲಿ. ಹಣ ಪಡೆದವರ ಗುರುತು ಬಹಿರಂಗಪಡಿಸಬೇಕು ಇಲ್ಲದಿದ್ದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಹಣ ಪಡೆದವರ ಮಾಹಿತಿ ಇದ್ದರೆ, ಅವರ ವಿರುದ್ಧ ದೂರು ದಾಖಲಿಸಿ, ಹಣ ಪಡೆದವರನ್ನು ಜೈಲಿಗೆ ಕಳುಹಿಸಲಿ, ಕ್ಷೇತ್ರದ ಶಾಸಕರಿಗೆ ಯಾವುದೇ ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗಲಿಲ್ಲ. ಟೋಲ್ ಕೇಂದ್ರದ ವಿಷಯ ಪ್ರಸ್ತಾಪಿಸಿದರೆ, ಸಿಡಿಮಿಡಿಗೊಳ್ಳುತ್ತಾರೆ” ಎಂದರು.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕ ಎಂ. ದೇವದಾಸ್, ವಕೀಲ ದಿನೇಶ್ ಹೆಗ್ಡೆ, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಉಡುಪಿ ಜಿಲ್ಲೆ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ದಿನೇಶ್ ಕುಂಪಲ, ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ಮಿಯಾಜ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಹೆದ್ದಾರಿ ಹೋರಾಟ ಸಮಿತಿ ಉಡುಪಿ ಸಂಚಾಲಕ ಶೇಖರ ಹೆಜಮಾಡಿ, ದಕ ಜಿಲ್ಲಾ ಲಾರಿ ಮಾಲಕರ ಸಂಘದ ಉಪಾಧ್ಯಕ್ಷ ಮೂಸಬ್ಬ ಪಕ್ಷಿಕೆರೆ, ದಲಿತ ಸಂಘರ್ಷ ಸಮಿತಿ ಸಂಚಾಲಕ ರಘು ಎಕ್ಕಾರು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಟಿ.ಎನ್. ರಮೇಶ್, ಶ್ರೀನಾಥ ಕುಲಾಲ್ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…