ದಕ್ಷಿಣ ಕ್ನನಡ: ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆಯ ಭಾರೀ ಹೈಡ್ರಾಮಾ ಸೃಷ್ಟಿಯಾಗುತ್ತಿದೆ. ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು.
ನ್ನೊಂದೆಡೆ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಟೋಲ್ ಪ್ಲಾಜಾ ಮೇಲೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು.ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದೇ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಸಲಾಯಿತು.
ಬ್ಯಾರಿಕೇಡ್ ಕಿತ್ತೆಸೆದು, ಟೋಲ್‍ಗೆ ಮುತ್ತಿಗೆ ಹಾಕಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಐವಾನ್ ಡಿಸೋಜ, ಮೊಯಿದ್ದೀನ್‍ಬಾವ, ಜೆ.ಆರ್ ಲೋಬೋ, ಮಿಥುನ್ ರೈ ಸೇರಿ ಹಲವರ ಬಂಧಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಸುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳಲಾಗಿದ್ದು, 6 ಕೆಎಸ್‍ಆರ್ ಪಿ, 5 ಸಿಎಆರ್, 250 ಸಿವಿಲ್, 4 ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿದಂತೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…