Featured

ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರ : ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ :-ನಳಿನ್ ಕುಮಾರ್ ಕಟೀಲ್ – Vishwanews24

ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ..ಅದಕ್ಕೆ ಅವಕಾಶ ಕೊಡೋಣ..

ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ..

ಇದು ಪ್ರಜಾಪ್ರಭುತ್ವ, ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ..

ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು..

ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಬದ್ದ ..

ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ ಇರುವ ಕಾರಣಕ್ಕೆ ಈ ಹೋರಾಟವನ್ನು ರಾಜಕೀಯವಾಗಿ ಮುಂದುವರೆಸುವುದು ತಪ್ಪು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿ ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ.

ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜೊತೆ ಮಾತನಾಡಿದ್ದೇನೆ. ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ.

ನಾನು ಹೋರಾಟಗಾರರ ಜೊತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ.

ಮಂಗಳೂರು: ಓವರ್‌ ಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ; 12 ವರ್ಷದ ಬಾಲಕ ಸಾವು – Vishwanews24

ಅದಕ್ಕೆ ಅವಕಾಶ ಕೊಡೋಣ. ತದನಂತರ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡೋಣ ಎಂದು ವಿನಂತಿ ಮಾಡಿದ್ರು.

ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ.

ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ’ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೊಮ್ಮೆ ಶುರುವಾಯ್ತು `ಧರ್ಮ ದಂಗಲ್’. ದೀಪಾವಳಿ ಹಬ್ಬಕ್ಕೆ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago