ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ ಇರುವ ಕಾರಣಕ್ಕೆ ಈ ಹೋರಾಟವನ್ನು ರಾಜಕೀಯವಾಗಿ ಮುಂದುವರೆಸುವುದು ತಪ್ಪು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇಂದು ಮಂಗಳೂರಿನಲ್ಲಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿ ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ.
ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜೊತೆ ಮಾತನಾಡಿದ್ದೇನೆ. ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ.
ನಾನು ಹೋರಾಟಗಾರರ ಜೊತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ.
ಅದಕ್ಕೆ ಅವಕಾಶ ಕೊಡೋಣ. ತದನಂತರ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡೋಣ ಎಂದು ವಿನಂತಿ ಮಾಡಿದ್ರು.
ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ.
ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ’ ಎಂದು ಹೇಳಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…