ಸುರತ್ಕಲ್: ಎನ್.ಐ.ಟಿ.ಕೆ. ಬಳಿಯಿರುವ ಟೋಲ್ ಗೇಟ್ ವಿರುದ್ಧ ಕಳೆದ ಕೆಲ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ಅವರ ಮೇಲೆ ಹಲ್ಲೆ ನಡೆಸಿದ 6 ಮಂಗಳಮುಖಿಯರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವಾಸವಿ ಗೌಡ(32), ಲಿಪಿಕಾ (19), ಹಿಮಾ (24), ಆದ್ಯ (22), ಮಾಯಾ (28) ಮತ್ತು ಮೈತ್ರಿ (28) ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ 12:30ರ ಸುಮಾರಿಗೆ ಮೊದಲಿಗೆ ಇಬ್ಬರು ಮಂಗಳಮುಖಿಯರು ಆಗಮಿಸಿ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಸುಮಾರು 10 ಮಂದಿಯಷ್ಟಿದ್ದ ಮಂಗಳಮುಖಿಯರ ತಂಡ ಆಗಮಿಸಿ ಧರಣಿ ನಿರತರನ್ನು ಅವಾಚ್ಯವಾಗಿ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಹಲ್ಲೆಗೂ ಯತ್ನಿಸಿದೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು ಆರು ಮಂದಿ ಮಂಗಳಮುಖಿಯರನ್ನು ಬಂಧಿಸಿದ್ದಾರೆ. ಸುರತ್ಕಲ್ ಠಾಣೇಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…