ಮಂಗಳೂರು: ಸುರತ್ಕಲ್ ಟೋಲ್ ತೆರವುಗೊಳಿಸುವಂತೆ ಆಗ್ರಹಿಸಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಸಂಯಮವಾಗಿ ವರ್ತಿಸುವಂತೆ ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಸೂಚನೆ ನೀಡಿದರು.
ಮಂಗಳವಾರ ಬೆಳಿಗ್ಗೆ ಪ್ರತಿಭಟನೆಯ ಪೊಲೀಸ್ ಬಂದೋಬಸ್ತು ಪರೀಶೀಲನೆ ನಡೆಸಿ ಬಳಿಕ ಅಧಿಕಾರಿ ಮತ್ತು ಸಿಬಂದಿಗಳಿಗೆ ಸೂಚನೆ ನೀಡಿದ ಅವರು ಟೋಲ್ ಮುಚ್ಚುವಂತೆ ಆಗ್ರಹಿಸಿ ಹಲವಾರು ವರ್ಷಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಕೂಡ ಪ್ರತಿಭಟನೆ ಆಯೋಜಿಸಲಾಗಿದೆ ಇದರಲ್ಲಿ ಹಲವಾರು ವ್ಯಕ್ತಿಗಳು ಸಂಘ-ಸಂಸ್ಥೆಗಳು ರಾಜಕೀಯ ವ್ಯಕ್ತಿಗಳು ಮುಖ್ಯವಾಗಿ ಮಹಿಳೆಯರು ಮತ್ತು ಹಿರಿಯ ನಾಗರಿಕರು ಭಾಗವಹಿಸುತ್ತಾರೆ. ವಿದ್ಯಾರ್ಥಿಗಳು ಕೂಡ ಭಾಗವಹಿಸುವ ಸಾಧ್ಯತೆ ಇರುತ್ತದೆ ಪೊಲೀಸರು ನಿಮ್ಮ ನಿಮ್ಮ ಹಿರಿಯ ಅಧಿಕಾರಿಗಳು ನೀಡಿದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾರು ಕೂಡ ಅನುಚಿತವಾಗಿ ವರ್ತನೆ ಮಾಡುವುದು ಸಯಮ ಕಳೆದುಕೊಳ್ಳುವುದು ಮಾಡಬಾರದು ಎಂದು ಹೇಳಿದರು.
ಟೋಲ್ ತೆರವಾದರೆ ಎಲ್ಲ ಸಾರ್ವಜನಿಕರಿಗೂ ಅನುಕೂಲವಾಗುತ್ತದೆ ತಾವು ಕೂಡ ಅದೇ ಟೋಲ್ ನಲ್ಲಿ ನಿಮ್ಮ ಕುಟುಂಬದವರು ಓಡಾಟ ಮಾಡುತ್ತೀರಿ. ಟೋಲ್ ಮುಚ್ಚುವ ಕುರಿತು ಜಿಲ್ಲಾಧಿಕಾರಿಗಳು ನಿರ್ಣಯ ತೆಗೆದುಕೊಳ್ಳುತ್ತಾರೆ ಯಾರು ಶಾಂತಿ ಕದಡದಂತೆ ಪ್ರತಿಭಟನಾಕಾರದಲ್ಲಿ ಮನವಿ ಮಾಡಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಂಯಮ ಕಳೆದುಕೊಳ್ಳದಂತೆ ನಾನು ವಿನಂತಿಸುತ್ತೇನೆ ಯಾರೇ ಆದರೂ ಅನುಚಿತವಾಗಿ ವರ್ತಿಸಿದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ನಾನು ಕೂಡ ಸ್ಥಳದಲ್ಲಿ ಇದ್ದು ಇತರ ಹಿರಿಯ ಅಧಿಕಾರಿಗಳು ಇರುತ್ತಾರೆ ಎಂದರು .
ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24
ಪ್ರತಿಭಟನೆಯಲ್ಲಿ ಹಿರಿಯ ನಾಗರಿಕರು ಮಹಿಳೆಯರು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ ಈ ಸಂದರ್ಭದಲ್ಲಿ ಪೊಲೀಸರು ಏನಾದರೂ ಅನುಚಿತವಾಗಿ ವರ್ತಿಸಿದರೆ ಅದು ಬೇರೆದೇ ರೂಪ ಪಡೆಯುವ ಸಾಧ್ಯತೆ ಇದೆ ಆದ್ದರಿಂದ ಎಲ್ಲರೂ ಎಚ್ಚರಿಕೆಯಿಂದ ವರ್ತಿಸಿ ಯಾರು ಕೂಡ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ ಸೂಚನೆ ನೀಡಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್ರಾಜ್ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…