ಸುರತ್ಕಲ್: ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಎಚ್ಚರಿಕೆ ನೀಡಿದ್ದಾರೆ.
ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯು ಸುರತ್ಕಲ್ ಟೋಲ್ ರದ್ದು ಮಾಡಲು ಆಗ್ರಹಿಸಿ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಚಿವ ನಿತಿನ್ ಗಡ್ಕರಿ ಅವರು ಮತ್ತೆ 15 ದಿನಗಳ ಒಳಗೆ ರದ್ದು ಮಾಡುವ ಮಾತುಗಳನ್ನಾಡಿದ್ದಾರೆ.
ಅವರಿಗೆ ಒಂದು ಅವಕಾಶ ನೀಡಲಿದ್ದೇವೆ. ಬಳಿಕವೂ ಮಾತು ತಪ್ಪಿದಲ್ಲಿ ಜೈಲ್ ಭರೋ ಹೋರಾಟ ಮಾಡುತ್ತೇವೆ. ಇಂದಿನ ರಾಜಕಾರಣದಲ್ಲಿ ಕೊಡುವ ಮಾತಿಗೆ ಬೆಲೆ ಇಲ್ಲದಂತಾಗಿ, ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ನ್ಯಾಯ ,ನೀತಿ ಧರ್ಮದಲ್ಲಿ ರಾಜಕಾರಣ ನಡೆಯುತ್ತಿಲ್ಲ ಎಂದು ವಿಷಾದಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ಯಾವುದೇ ಸೌಲಭ್ಯವಿಲ್ಲದ ಈ ಟೋಲ್ ಅನಧಿಕೃತ ಎಂದು ಸ್ವತಃ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೂ ತೆರವಿಗೆ ವಿಳಂಬ ಯಾಕೆ? ಟೋಲ್ ನಲ್ಲಿಯೂ ಸಂಸದರು, ಶಾಸಕರಿಗೆ ಶೇ 40% ಕಮಿಷನ್ ಹೋಗುತ್ತಿರಬೇಕು. ಅದಕ್ಕೆ ಇದನ್ನು ಮುಚ್ಚುವ ಕೆಲಸ ಮಾಡುತ್ತಿಲ್ಲ.ಕೇಂದ್ರದ ಸಚಿವರು ಹೇಳಿದಂತೆ ಈ ಟೋಲ್ ತೆಗೆಯದಿದ್ದಲ್ಲಿ ನಾವೇ ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿ ಅರಬ್ಬಿ ಸಮುದ್ರಕ್ಕೆ ಎಸೆಯಲು ಸಿದ್ದರಿದ್ದೇವೆ. ಜನರಿಗಾಗಿ ಜೈಲು ಸೇರಲು ಹಿಂದೇಟು ಹಾಕುವುದಿಲ್ಲ ಎಂದು ನುಡಿದರು.
ಮೊಯಿದೀನ್ ಬಾವಾ, ವಿನಯ್ ಕುಮಾರ್ ಸೊರಕೆ, ಎಂ.ಜಿ ಹೆಗಡೆ,ವೈ ವೈ ರಾಘವೇಂದ್ರ ರಾವ್,ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಪುರುಷೋತ್ತಮ್ ಚಿತ್ರಾಪುರ, ಶಾಲೆಟ್ ಪಿಂಟೋ,ಪಿ.ವಿ ಮೋಹನ್,ಶಶಿಧರ್ ಹೆಗ್ಡೆ ಸಹಿತ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…