ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಳಾಯಿ ಗ್ರಾಮದ ಯಶೋದ ಕ್ಲಿನಿಕ್ ಸಮೀಪದ ನಿವಾಸಿ ಶ್ರೀಮತಿ ಅಮಿತಾ (43), ಗಂಡ ಸುರೇಶ್, ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಅವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಪೂಜಾ ಪರಿಕರಗಳನ್ನು ಇಟ್ಟುಕೊಂಡಿದ್ದು, ಮನೆಯಲ್ಲಿ ಯಾರೂ ವಾಸವಿಲ್ಲದೆ ನಿಯಮಿತವಾಗಿ ಪೂಜೆ ಮಾಡಿ ಬೀಗ ಹಾಕಲಾಗುತ್ತಿತ್ತು. ದಿನಾಂಕ 26-12-2025ರ ರಾತ್ರಿ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗದು ಒಳಪ್ರವೇಶಿಸಿ ಸುಮಾರು ರೂ.1 ಲಕ್ಷ ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ, ಮಂತ್ರದೇವತೆಯ ಬೆಳ್ಳಿಯ ಮೂರ್ತಿ, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, ಬೆಳ್ಳಿಯ ಕಡ್ಸಲೆ (ಖಡ್ಗ), ತಾಮ್ರದ ಘಂಟೆಗಳು, ತಾಮ್ರದ ಚೆಂಬುಗಳು ಹಾಗೂ ಎಲ್‌ಇಡಿ ಟಿವಿಯನ್ನು ಕಳವು ಮಾಡಿದ್ದರು.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 170/2025 ಕಲಂ 331(4), 305(ಎ) ಬಿ.ಎನ್.ಎಸ್ ಅಡಿ ದಿನಾಂಕ 27-12-2025ರಂದು ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ವೇಳೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ವಾಜೀದ್ ಜೆ @ ವಾಜಿ (27), ತಂದೆ ಜಾಫರ್ ಖಾನ್, ಬಜಪೆ ಮೂಲದವರನ್ನು ಪೊಲೀಸರು ಬಂಧಿಸಿದರು.
ವಿಚಾರಣೆಯಲ್ಲಿ ಆರೋಪಿ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡು, ಕಳವು ಮಾಡಿದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆ ದಿನಾಂಕ 27-01-2026ರಂದು ಸಯ್ಯದ್ ಆಲಿ (40), ತಂದೆ ಕೆ. ವೀರನ್ ಕುಟ್ಟಿ ಅವರನ್ನು ಕೂಡ ಬಂಧಿಸಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…