Featured

ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಸವಾರ ಸಾವು, ಸಹ ಸವಾರನಿಗೆ ಗಾಯ – vishwanews24

ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸಾವು, ಸಹ ಸವಾರನಿಗೆ ಗಾಯ

ಸುರತ್ಕಲ್: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಬಾಲಕ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ರವಿವಾರ ರಾತ್ರಿ ನಡೆದಿದೆ.

ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ(61) ಮೃತಪಟ್ಟವರು. ಮೂಲತಃ ಉತ್ತರ ಕರ್ನಾಟದ ಸದ್ಯ ಚೇಳಾಯರಿನಲ್ಲಿ ವಾಸವಿರುವ ಹನುಮಂತ ಎಂಬವರ ಪುತ್ರ ವಿಶ್ವನಾಥ (16) ಗಾಯಗೊಂಡ ಬಾಲಕ. ಆತನನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಕಾರಣವಾಗಿರುವ ಕಾರಿನ ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬವರನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಕರುಣಾಕರ ಶೆಟ್ಟಿ ಮುಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ ಅಂಗಡಿ ಮುಚ್ಚಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟವರು ಹಾಲು ಖರೀದಿಗೆ ಬಂದಿದ್ದ ನೆರೆ ಮನೆಯ ವಿಶ್ವಾನಾಥ ರನ್ನು ಕುಳ್ಳಿರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66ನ್ನು ದಾಟುತ್ತಿದ್ದ ವೇಳೆ ಹಳೆಯಂಗಡಿ ಕಡೆಯಿಂದ ಸುರತ್ಕಲ್ ತನ್ನ ತೆರಳುತ್ತಿದ್ದ ಕಾರು ಢಿಕ್ಕಿಹೊಡೆದಿದೆಯೆನ್ನಲಾಗಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಕರುಣಾಕರ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಸಹಸವಾರರಾಗಿದ್ದ ವಿಶ್ವನಾಥರಿಗೆ ಕೈಕಾಲಿಗೆ ಗಂಭೀರ ಗಾಯಗಳಾಗಿದ್ದು, ಮುಕ್ಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago