ಸುರತ್ಕಲ್: ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸುರತ್ಕಲ್ ಶುಭಗಿರಿ ಸಮೀಪ ಬುಧವಾರ ರಾತ್ರಿ ಸಂಭವಿಸಿದೆ.
ಹೊಸಬೆಟ್ಟು ನಿವಾಸಿ ಲಕ್ಷ್ಮೀ(69) ಮೃತ ದುರ್ದೈವಿ.
ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್ ನಲ್ಲಿ ಬಂದು ರಾ.ಹೆ. ದಾಟಿ ಉಡುಪಿ ಮಂಗಳೂರು ಹೆದ್ದಾರಿ ದಾಟುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಲಕ್ಷ್ಮೀ ಅವರಿಗೆ ಉಡುಪಿ ಮೂಲದ ಇಬ್ಬರಿದ್ದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ಪರಿಣಾಮ ರಸ್ತೆಗೆಸೆಯಲ್ಪಟ್ಟ ಲಕ್ಷ್ಮೀ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆಯೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಅವರು ತನಿಖೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…