Featured

ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೃತದೇಹ ಪತ್ತೆ – Vishwanews24

ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೃತದೇಹ ಪತ್ತೆ

ಸುರತ್ಕಲ್:ನಿನ್ನೆಯಿಂದ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆ ದಾರುಣ ಘಟನೆ ನಡೆದಿದೆ.

ಮೃತ ಮಕ್ಕಳನ್ನು ಯಶ್ಚಿತ್‌(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್‌(15) ಎಂದು ಗುರುತಿಸಲಾಗಿದೆ.

ಈ ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.

ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ
ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

32 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

47 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

54 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 hour ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

4 hours ago