ಸುರತ್ಕಲ್: ಒಂದು ವರ್ಷದಿಂದ ಪಾಳು ಬಿದ್ದಿರುವ, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ, ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ ಗಳನ್ನು ಹೆದ್ದಾರಿ ಪ್ರಾಧಿಕಾರ ಇಂದು ತೆರವುಗೊಳಿಸಿದೆ ಎಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಡಿ.1ರಂದು ಸುರತ್ಕಲ್ ಟೋಲ್ ಸಂಗ್ರಹ ರದ್ದು ಗೊಂಡು ಹೋರಾಟ ಗೆಲುವು ಸಾಧಿಸಿದ ದಿನವಾಗಿದ್ದು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಗೆಲುವಿನ ಸಂಭ್ರಮಾಚರಣೆ ಹಾಗೂ ಅದೇ ಸಂದರ್ಭ ನಿರುಪಯುಕ್ತ ಟೋಲ್ ಗೇಟ್ ರಚನೆ ತೆರವು, ನಂತೂರು- ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯನ್ನಾಗಿಸುವುದು ಸಹಿತ ಹೆದ್ದಾರಿಯ ಹಲವು ಸಮಸ್ಯೆ ಗಳ ಪರಿಹಾರಕ್ಕಾಗಿ ಆಗ್ರಹ ಸಭೆ ಆಯೋಜಿಸಿದೆ. ಇದಕ್ಕೆ ದೊಡ್ಡ ಪ್ರಮಾಣದ ಜನ ಬೆಂಬಲ ದೊರೆತಿದೆ. ಹೋರಾಟ ಸಮಿತಿಯೂ ಕಾರ್ಯಕ್ರಮದ ಯಶಸ್ಸಿಗೆ ವ್ಯಾಪಕ ಸಿದ್ಧತೆ ನಡೆಸುತ್ತಿದೆ.
ಸಂಭ್ರಮಾಚರಣೆಯ ಮುನ್ನಾ ದಿನ ನಿರುಪಯುಕ್ತ ಟೋಲ್ ಗೇಟ್ ಪಾಳು ಬಿದ್ದ ಬೂತ್ ಗಳನ್ನು ತೆರವುಗೊಳಿಸಿ ರುವುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೆ ಹೋರಾಟ ಭುಗಿಲೇಳುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈ ಅಲ್ಪ ಪ್ರಮಾಣದ ತೆರವು ಪ್ರಕ್ರಿಯೆ ನಡೆದಿದೆ ಎಂದು ಮುನೀರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…