ಸುರತ್ಕಲ್: ರಾಜ್ಯದಲ್ಲಿ ದ್ವೇಷ ರಾಜಕಾರಣಕ್ಕೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾಗಿರುವ ಪ್ರವೀಣ ನೆಟ್ಟಾರು ಅವರ ಪತ್ನಿಗೆ ಮಾನವೀಯ ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿರುವ ಕೆಲಸವನ್ನ ಕೂಡ ಕಸಿದುಕೊಂಡಿದ್ದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣ ಮುಖ್ಯಮಂತ್ರಿಗಳು ಮಾನವೀಯ ನೆಲೆಯಲ್ಲಿ ನೂತನ ಕುಮಾರಿ ಅವರಿಗೆ ಉದ್ಯೋಗದ ಆದೇಶ ಪುನರ್ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ಕಾರ್ಯಕರ್ತರು ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು ಹಲವಾರು ಕಡೆ ಹಲ್ಲೆ ನಡೆದ ಪ್ರಕರಣ ನಡೆದಿದೆ.
ಮಾಜಿ ಸಚಿವರಾದ ಡಾ. ಅಶ್ವತ್ಥ ನಾರಾಯಣ್ ಅವರ ಮೇಲೆಯೂ ಕೂಡ ದುರುದ್ದೇಶಪೂರಿತವಾಗಿ ಕೇಸು ದಾಖಲಿಸಿದೆ.
ಒಂದಡೆ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನು ಜನರಿಗೆ ಕೊಡಲು ಒದ್ದಾಡುತ್ತಿರುವ ಸರ್ಕಾರ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಸಲುವಾಗಿ ಬಿಜೆಪಿಯ ವಿರುದ್ಧ ಹಗೆಯನ್ನ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ ಆಕ್ರೋಶ ವ್ಯಕ್ತಪಡಿಸಿರುವ ಅವರು ಆರ್ ಎಸ್ ಎಸ್, ಬಜರಂಗದಳ ಸಹಿತ ಹಿಂದೂ ಪರ ಕೆಲಸ ಮಾಡುವ ಸಂಘಟನೆಗಳನ್ನು ಗುರಿಯಾಗಿಸಿ ಯಾವುದೇ ಕ್ರಮ ಕೈಗೊಂಡರೂ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಉಂಟಾದರೆ ರಾಜ್ಯ ಸರಕಾರದ ಹೊಣೆಗೇಡಿತನದ ನಿರ್ಧಾರ ಕಾರಣವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…