ಮಂಗಳೂರು : ಸುರತ್ಕಲ್ ಅ.5 ರಂದು ಬಜರಂಗದಳ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಕೋಮು ವೈಷಮ್ಯ ಹೆಚ್ಚಿಸುವ ಪ್ರಚೋಧನಕಾರಿ ಭಾಷಣ ಹಾಗೂ ಕೋಟಿ- ಚೆನ್ನಯರ ಆಯುಧವನ್ನು ರೌಡಿಗಳು ಬಳಸುವ ತಲವಾರಿಗೆ ಹೋಲಿಸಿ ಪವಿತ್ರ ನಂಬಿಕೆಗೆ ಘಾಸಿ ಉಂಟು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬಂಟ್ವಾಳದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಒಂದು ಕೋಮಿನವರನ್ನು ಎತ್ತಿ ಕತ್ತುವ ಕೋಮು ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಇದರಿಂದ ಕಾನೂನು ಸುವ್ಯವ್ಸ್ಥೆಗೆ ಧಕ್ಕೆ ಆಗಲಿದ್ದು ಈಕೆಯ ಹಾಗೂ ಬಜರಂಗದಳ ಸಂಘಟಕರ ವಿರುದ್ದ ಕೇಸು ದಾಖಲಿಸಬೇಕು. ಇದರ ಜೊತೆಗೆ ಕಾಂಗ್ರೆಸ್ ಮುಖಂಡರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿ ಅವಮಾನ ಮಾಡಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಕೋಮು ಪ್ರಚೋದಕ ಭಾಷಣದ ವಿರುದ್ದ ಸುರತ್ಕಲ್ ಅಬ್ದುಲ್ ಖಾದರ್ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…