ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಪೊಲೀಸರ ಪ್ರಕಾರ, ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಅಪ್ರಾಪ್ತ ಬಾಲಕಿಗೆ ಪ್ರೀತಿಯ ನಂಬಿಕೆ ಮೂಡಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ.
ಇದನ್ನೂ ಓದಿ :
ಈ ವಿಚಾರವನ್ನು ಬಾಲಕಿ ಮನೀಶ್‌ಗೆ ತಿಳಿಸಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ತಿರಸ್ಕರಿಸಿದ ಹಿನ್ನೆಲೆ ಬಾಲಕಿ ಜೂ,22ರಂದು ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಳು. ತಾಯಿ ಆಕೆಗೆ ಧೈರ್ಯ ಹೇಳಿ ಸಮಾಧಾನಪಡಿಸಿದ್ದರು. ಆದರೆ ತಾಯಿ ಮರುದಿನ ಮಂಗಳವಾರ ಬೆಳಗ್ಗೆ ಕೆಲಸಕ್ಕೆ ತೆರಳಿ ಹಿಂದಿರುಗಿ ಮನೆಗೆ ಬಂದಾಗ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಬಾಲಕಿಯ ತಾಯಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಆರೋಪಿ ಮನೀಶ್ ಪೂಜಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳು ಹಾಗೂ ಪೊಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ :
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…