ಮಂಗಳೂರು : ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂಬಾತನನ್ನು ಬಂಧನ ಮಾಡಲಾಗಿದ್ದು, ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ಆರೋಪಿಗಳನ್ನು ಕರೆದುಕೊಂಡು ಹೋಗಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ. 28ರಂದು ರಾತ್ರಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ನನ್ನು ದುಷ್ಕರ್ಮಿಗಳು ತಲ್ವಾರ್ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು.
ಪ್ರಕರಣ ಸಂಬಂಧ ಈಗಾಗಲೇ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ 6 ಮಂದಿ ಹಾಗು ಕೃತ್ಯ ನಡೆಸಲು ಕಾರು ನೀಡಿದ್ದ ಓರ್ವ ಸೇರಿ ಹಾಗೂ ಆಶ್ರಯ ನೀಡಿದ್ದ ಇನ್ನೋರ್ವ ಸೇರಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…