ಮಂಗಳೂರು: ಸುರತ್ಕಲ್‍ನಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಹಂತಕರನ್ನು ಸೋಮವಾರ ರಾತ್ರಿ ಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮತ್ತು ಆರೋಪಿಗಳ ಹೆಸರನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.
ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೌಡಿಶೀಟರ್ ಸುಹಾಸ್ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿಯೂ ಮೂವರು ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವಕರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಫಾಝಿಲ್ ಹತ್ಯೆ ನಂತರ ಮಂಗಳೂರು ಸಿಟಿ ಹೊರವಲಯದ ಕಾರ್ಕಾಳದಲ್ಲಿ ಕಾರನ್ನು ಬಿಟ್ಟು ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳ ಜಾಡು ಬೆನ್ನು ಹತ್ತಿದ್ದ ಮಂಗಳೂರು ಪೊಲೀಸರಿಗೆ ಆರೋಪಿಗಳು ಇರುವ ಸ್ಥಳದ ಬಗ್ಗೆ ಮಾಹಿತಿ ದೊರೆತಿತ್ತು.
ಒಂದು ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ನಿಲ್ಲದ ಆರೋಪಿಗಳ ಜಾಡನ್ನು ಪತ್ತೆ ಹಚ್ಚಿದ ಪೊಲೀಸರು, ಸೋಮವಾರ ಸಂಜೆ 6:30ರ ಸರಿ ಸುಮಾರಿಗೆ ಆರೋಪಿಗಳಿದ್ದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ ಅಲ್ಲಿಂದಲೂ ಆರೋಪಿಗಳು ಎಸ್ಕೇಪ್ ಆಗಿದ್ದರು. ಬಳಿಕ ಅವರಿಗಾಗಿ ಮತ್ತೆ ಹುಡುಕಾಟ ನಡೆಸಿದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತಂಡ, ಮಿಸ್ ಆಗಿದ್ದ ಸ್ಥಳದಿಂದ 15 ಕಿಲೋ ಮೀಟರ್ ದೂರದಲ್ಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಮೂವರು ಆರೋಪಿಗಳನ್ನು ಸುರತ್ಕಲ್‍ಗೆ ಕರೆ ತಂದಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…