ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಹಾಗೂ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಾಲಕಿಯ ಕುರಿತ ಕೆಲವೊಂದು ವಿಚಾರಗಳು ಗೊತ್ತಿದ್ದರೂ ಹೆತ್ತವರು ಮೌನವಾಗಿದ್ದರಿಂದ ಗಂಭೀರ ಸ್ಥಿತಿಗೆ ತಲುಪುವಂತಾಯಿತು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಈ ಪ್ರಕರಣದ ಗಂಭೀರತೆಯನ್ನು ಪ್ರಸ್ತಾಪಿಸಿ ಅವರು ಮಾತನಾಡಿದರು.
“ಆತ್ಮಹತ್ಯೆ ಮಾಡಿಕೊಂಡ ಬಾಲಕಿಯು ಸ್ಥಳೀಯ ಮ್ಯೂಸಿಕ್ (ಸಂಗೀತ) ತಂಡವೊಂದರ ಸದಸ್ಯೆಯಾಗಿದ್ದಳು. ಆ ತಂಡದ ಕೆಲವು ಸದಸ್ಯರು ತೀವ್ರ ಮಾದಕ ದ್ರವ್ಯ ವ್ಯಸನಿಗಳಾಗಿದ್ದು, ಅವರ ಮೇಲೆ ಈ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕರಣಗಳು ದಾಖಲಾಗಿದ್ದವು. ಇದೇ ತಂಡದ ಸದಸ್ಯರು ಬಾಲಕಿಗೆ ದೈಹಿಕವಾಗಿ ತೀವ್ರ ಕಿರುಕುಳ ನೀಡಿದ್ದಾರೆ. ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು, ಮಾನಸಿಕ ನೊಂದ ಬೆನ್ನಲ್ಲೇ ಇದೀಗ ಆತ್ಮಹತ್ಯೆಯ ಹಾದಿ ಹಿಡಿದಿದ್ದಾಳೆ” ಎಂದು ಕಮಿಷನರ್ ತನಿಖೆಯ ವಿವರಗಳನ್ನು ಬಿಚ್ಚಿಟ್ಟರು.
ಪ್ರಕರಣದಲ್ಲಿ ಪೋಷಕರ ನಡೆ ಹಾಗೂ ನಿಗಾ ವಹಿಸದ ಧೋರಣೆಯ ಕುರಿತು ಕಮಿಷನರ್ ತೀವ್ರ ವಿಷಾದ ವ್ಯಕ್ತಪಡಿಸಿದರು. “ಬಾಲಕಿಯ ಕುರಿತ ಕೆಲವೊಂದು ಆತಂಕಕಾರಿ ವಿಚಾರಗಳು ಮೊದಲೇ ಗೊತ್ತಿದ್ದರೂ ಹೆತ್ತವರು ದೀರ್ಘಕಾಲ ಮೌನವಾಗಿದ್ದರಿಂದ ಪರಿಸ್ಥಿತಿ ಇಷ್ಟು ಗಂಭೀರ ಸ್ಥಿತಿಗೆ ತಲುಪುವಂತಾಯಿತು. ಬಾಲಕಿ ಮ್ಯೂಸಿಕ್ ತಂಡದ ನೆಪದಲ್ಲಿ ತಡರಾತ್ರಿ ಮನೆಗೆ ಬರುತ್ತಿದ್ದಾಗ ಹೆತ್ತವರು ಆಕೆಯನ್ನು ಪ್ರಶ್ನಿಸಬೇಕಾಗಿತ್ತು. ಕಳೆದ ಒಂದು ವರ್ಷದಿಂದಲೂ ಮೌನವಾಗಿದ್ದ ಹೆತ್ತವರು, ಈಗ ಘಟನೆ ನಡೆದ ಬಳಿಕ ಆರೋಪಿಗಳ ಪತ್ತೆಗೆ ಆಗ್ರಹಿಸುತ್ತಿದ್ದಾರೆ. ನಮ್ಮ ಇಲಾಖೆ ಖಂಡಿತವಾಗಿಯೂ ಆರೋಪಿಯನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತದೆ. ಆದರೆ, ಹೆತ್ತವರಿಗೂ ಮಕ್ಕಳ ನಡವಳಿಕೆಯ ಮೇಲೆ ಜವಾಬ್ದಾರಿ ಇರಬೇಕಾಗಿತ್ತು” ಎಂದು ಅವರು ಕಿವಿಮಾತು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…