ಸುರತ್ಕಲ್ ಬೀಚ್​ನಲ್ಲಿ ಅಪರೂಪದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಪತ್ತೆ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್ ಬೀಚ್​ನಲ್ಲಿ ಅಪರೂಪದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಪತ್ತೆ

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್​ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ ಮೀನು, ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ.

ತುಳುವಿನಲ್ಲಿ ಈ ಮೀನುನನ್ನು ಮರಂಚಾ ಮೀನು ಎಂದು ಕರೆಯುತ್ತಾರೆ. ಕಲ್ಲು ಇರುವ ಪ್ರದೇಶದಲ್ಲಿ ಈ ಮೀನು ಗಾಳಕ್ಕೆ ಅಪರೂಪಕ್ಕೆ ಸಿಗುತ್ತದೆ. ಇದರ ಹಲ್ಲು ಹರಿತವಾಗಿರುತ್ತದೆ. ಇದನ್ನು ಸ್ಥಳೀಯರು ತಿನ್ನುವುದಿಲ್ಲ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ – ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ  – Vishwanews24

Leave a Reply