ಸುರತ್ಕಲ್: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಭಾನುವಾರದಂದು ಘಟನೆ ಸಂಬಂಧ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು. ಸೋಮವಾರ ಮತ್ತಿಬ್ಬರು ಆರೋಪಿಗಳಾದ ಅಮಲ್ ಅಜಯನ್ ಮತ್ತು ನಿಶಾಂತ್ ಬಂಧಿಸಲಾಗಿತ್ತು, ಇತರ ಮೂವರು ಆರೋಪಿಗಳಿಗೆ ಶೋಧ ಮುಂದುವರಿದಿದೆ.
ಬಂಧಿತರ ವಿರುದ್ದ ಪೊಲೀಸರು ಐಪಿಸಿ ಸೆಕ್ಷನ್ ೩೦೭ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ
ಘಟನೆಯಲ್ಲಿ ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…