Featured

ಸುರತ್ಕಲ್:  ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ : ರಿಕ್ಷ ಚಾಲಕನಿಗೆ ಗಾಯ – Vishwanews24

ಸುರತ್ಕಲ್:  ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ : ರಿಕ್ಷ ಚಾಲಕನಿಗೆ ಗಾಯ

ಸುರತ್ಕಲ್ : ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago