Featured

ಸುರತ್ಕಲ್: ಲೈಟ್ ಹೌಸ್ ಬೀಚ್‌ನಲ್ಲಿ ಮುಳುಗಿ ನಾಪತ್ತೆಯಾದ ಯುವಕನ ಮೃತದೇಹ ಪತ್ತೆ – Vishwanews24

ಸುರತ್ಕಲ್: ಲೈಟ್ ಹೌಸ್ ಬೀಚ್‌ನಲ್ಲಿ ಮುಳುಗಿ ನಾಪತ್ತೆಯಾದ ಯುವಕನ ಮೃತದೇಹ ಪತ್ತೆ

ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್‌ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ.

ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್ ಬೀಚ್ ನಲ್ಲಿ ಯುವಕ ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಮೃತದೇಹ ಪತ್ತೆಯಾಗಿದೆ.

ಸತ್ಯಂ ಮತ್ತು ಆತನ ಸ್ನೇಹಿತ ಶನಿವಾರ ಸಮುದ್ರದಲ್ಲಿ ಈಜಲು ಹೋಗಿದ್ದರು. ಇಬ್ಬರೂ ಸಮುದ್ರದ ಪ್ರವಾಹದಲ್ಲಿ ಸಿಲುಕಿಕೊಂಡಾಗ, ಸತ್ಯಂನ ಸ್ನೇಹಿತ ಸುರಕ್ಷಿತವಾಗಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸತ್ಯಂ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದರು .

ಸತ್ಯಂ ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ಓದುತ್ತಿದ್ದರು.ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

10 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

3 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

3 hours ago