ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್‌ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ.
ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್ ಬೀಚ್ ನಲ್ಲಿ ಯುವಕ ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಮೃತದೇಹ ಪತ್ತೆಯಾಗಿದೆ.
ಸತ್ಯಂ ಮತ್ತು ಆತನ ಸ್ನೇಹಿತ ಶನಿವಾರ ಸಮುದ್ರದಲ್ಲಿ ಈಜಲು ಹೋಗಿದ್ದರು. ಇಬ್ಬರೂ ಸಮುದ್ರದ ಪ್ರವಾಹದಲ್ಲಿ ಸಿಲುಕಿಕೊಂಡಾಗ, ಸತ್ಯಂನ ಸ್ನೇಹಿತ ಸುರಕ್ಷಿತವಾಗಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸತ್ಯಂ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದರು .
ಸತ್ಯಂ ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ಓದುತ್ತಿದ್ದರು.ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…