ಸುರತ್ಕಲ್: ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋರ್ಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ ಜಂಕ್ಷನ್ ಬಳಿ ಮಾ.4ರ ಬೆಳಗ್ಗೆ ನಡೆದಿದೆ.
ಆಸ್ಪತ್ರೆಯೊಂದರ ವೈದ್ಯ ಹಾಗೂ ಮತ್ತೊಬ್ಬರು ಆ ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿರುದ್ಧ ದಿಕ್ಕಿನಿಂದ ಸುಭಾಷಿತನಗರ ಕಡೆಗೆ ಹೋಗಲು ಕಾರು ಚಾಲಕ ಏಕಾಏಕಿ ಹೆದ್ದಾರಿಗೆ ನುಗ್ಗಿದ್ದು, ಈ ವೇಳೆ ಉಡುಪಿ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕ ಬಲಬದಿಗೆ ತಿರುಗಿಸಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪರಾಗಿದ್ದಾರೆ. ಇಲ್ಲದಿದ್ದರೆ ಭೀಕರ ಅಪಘಾತ ಸಂಭವಿಸುತ್ತಿತ್ತು ಎನ್ನಲಾಗುತ್ತದೆ.
ಸ್ಥಳಕ್ಕೆ ಬೈಕಂಪಾಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…