Featured

ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿನ ಬದಲು ಕೋಟಿ ಚೆನ್ನಯ್ಯ ಹೆಸರಿಡಿ : ಮುಸ್ಲಿಂ ಮುಖಂಡರ ಮನವಿ – Vishwanews24

ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿನ ಬದಲು ಕೋಟಿ ಚೆನ್ನಯ್ಯ ಹೆಸರಿಡಿ : ಮುಸ್ಲಿಂ ಮುಖಂಡರ ಮನವಿ

ಮಂಗಳೂರು: ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ‌ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿವ ಮುಸ್ಲಿಮರು ಸಾವರ್ಕರ್ ಹೆಸರಿನ ಬದಲು ಬೇರೆ ಹೆಸರಿಡುವಂತೆ ಮನವಿ ಮಾಡಿದ್ದಾರೆ.

ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ವಿಶೇಷ ಮನವಿ ಮಾಡಿದ್ದು, ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿನ ಬದಲು ಕೋಟಿ ಚೆನ್ನಯ್ಯ ಹೆಸರಿಡಿ ಎಂದು ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ‌ಮತ್ತು ಮೇಯರ್ ಗೆ ಮನವಿ ಸಲ್ಲಿಸಿದೆ.

ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡಲು ಮುಸ್ಲಿಮರು ಈ ಮೂಲಕ ಮನವಿ‌ ಮಾಡಿದ್ದಾರೆ. ಕೋಟಿ ಚೆನ್ನಯ್ಯರ ಹೆಸರಿನ ಜೊತೆ ಶ್ರೀನಿವಾಸ ಮಲ್ಯ ಮತ್ತು ಎಂ.ಲೋಕಯ್ಯ ಶೆಟ್ಟಿ ಹೆಸರನ್ನು ಕೂಡಾ ಅವರು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ ನವ ಮಂಗಳೂರು ‌ನಿರ್ಮಾತೃ ಶ್ರೀನಿವಾಸ ಮಲ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಂ.ಲೋಕಯ್ಯ ಶೆಟ್ಟಿ ಹೆಸರನ್ನು ಕೂಡಾ ಇಡಬೇಕೆಂದು ಒತ್ತಾಯಿಸಿದ್ದಾರೆ.

ಬಂಟ್ವಾಳ: ಅಪರಿಚಿತ ಯುವತಿಯ ಮೃತದೇಹ ಪತ್ತೆ – Vishwanews24

ಸದ್ಯ ಮಂಗಳೂರು ‌ಮಹಾನಗರ ಪಾಲಿಕೆ ಸಭೆಯಲ್ಲೂ ಶಾಸಕ ಭರತ್ ಶೆಟ್ಟಿ ಪ್ರಸ್ತಾಪ ಪಾಸ್ ಆಗಿದ್ದು ಹೀಗಾಗಿ ಸುರತ್ಕಲ್ ಗೆ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಸದ್ಯ ಪಾಲಿಕೆಯು ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ಪಡೆಯಲು ಮುಂದಾಗಿದೆ.

ಈ ಮಧ್ಯೆಯೇ ಮತ್ತೆ ಮೂರು ಹೆಸರು ಸೂಚಿಸಿ ಮುಸ್ಲಿಂ ಸಂಘಟನೆ ಶಾಸಕರ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಹೀಗಾಗಿ ಮಂಗಳೂರು ಪಾಲಿಕೆಗೆ ಸುರತ್ಕಲ್ ‌ಸರ್ಕಲ್ ನಾಮಕರಣ ವಿವಾದ ಮತ್ತೆ ತಲೆ ನೋವಾಗಿದೆ. ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸೋ ಮುನ್ನವೇ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಮುಸ್ಲಿಂ ಹೆಸರು ಸೂಚಿಸದೇ ಮುಸ್ಲಿಂ ‌ಸಂಘಟನೆಗಳು ಈ ಮೂಲಕ ಅಚ್ಚರಿ‌ ನಡೆ ಇಟ್ಟಿವೆ. ವಿವಾದಿತ ವ್ಯಕ್ತಿಗಳ ಹೆಸರಿಟ್ಟರೆ ಕೋಮು ಸೌಹಾರ್ದ ಹಾಳಾಗುವ ಸಾಧ್ಯತೆ ಅಂತ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು – Vishwanews24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

23 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago