ಮಂಗಳೂರು : ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಕ್ರಮವನ್ನು ಖಂಡಿಸಿದೆ.
ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಿಪಿಐ ನಿಯೋಗವು, ಭಾರತದ ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗಿಯಾಗಿರುವ ಪ್ರಮುಖ ವ್ಯಕ್ತಿಗಳ, ಸ್ವಾತಂತ್ರ್ಯ ಸಂಗ್ರಾಮಗಳಲ್ಲಿ ಪಾಲ್ಗೊಂಡಿರುವ ಸ್ಥಳೀಯರ ಅಥವಾ ಖ್ಯಾತ ಸಾಹಿತಿ, ಕ್ರೀಡೆ, ಕಲೆ ಮುಂತಾದ ಕ್ಷೇತ್ರಗಳಲ್ಲಿನ ಸಾಧಕರ ಹೆಸರನ್ನು ಸ್ಥಳೀಯ ರಸ್ತೆ – ವೃತ್ತಗಳಿಗೆ ಇಡುವುದು ಸಾಮಾನ್ಯ ಕ್ರಮವಾಗಿದೆ.
ಆದರೆ ತನ್ನನ್ನು ತಾನೇ ‘ವೀರ’ ಎಂದು ಕರೆದುಕೊಂಡಿರುವ, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದ ಸಮಯದಲ್ಲಿ ಬ್ರಿಟಿಷ್ ಸರಕಾರಕ್ಕೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟು ಅವರಿಂದ ಪಿಂಚಣಿ ಪಡೆಯುತ್ತಿದ್ದ ಹಿಂದುತ್ವವಾದಿ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕೆಲವರು ಬಿಂಬಿಸಿದರೆ ಅದು ಅವರಿಗಷ್ಟೇ ಸೀಮಿತವಾಗುತ್ತದೆಯೇ ಹೊರತು ದೇಶಕ್ಕಲ್ಲ. ಆದ್ದರಿಂದ ಸಾವರ್ಕರ್ ಹೆಸರನ್ನು ಸುರತ್ಕಲ್ ವೃತ್ತಕ್ಕೆ ಇಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಸಾವರ್ಕರ್ ಬದಲಾಗಿ ಸುರತ್ಕಲ್ ವೃತ್ತಕ್ಕೆ ಮೇಲೆ ಪ್ರಸ್ತಾಪಿಸಿದ ಯಾವುದೇ ವ್ಯಕ್ತಿಯ ಹೆಸರಿಡುವಂತೆ ಸಿಪಿಎಂ ಮನವಿಯಲ್ಲಿ ಒತ್ತಾಯಿಸಿದೆ.
ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24
ಮನವಿ ಸಲ್ಲಿಸಿದ ನಿಯೋಗದಲ್ಲಿ CPI ದ.ಕ. ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಮಾಜಿ ಕಾರ್ಯದರ್ಶಿ ವಿ.ಕುಕ್ಯಾನ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್, AIYFನ ಮಂಗಳೂರಿನ ಕೃಷ್ಣಪ್ಪ ವಾಮಂಜೂರು ಹಾಗೂ ಮಂಗಳೂರು ತಾಲೂಕು ಕಾರ್ಯದರ್ಶಿ ಎಂ.ಕರುಣಾಕರ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…