Featured

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ – vishwanews24

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಸುರತ್ಕಲ್‌ :ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐ ಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು.

ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಹಿನ್ನಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು, ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.

ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ಘೋಷಿಸಿದರು. ಕಾಲಮಿತಿಯ ಒಳಗಡೆ ವರದಿ ಪಡೆದು ಕ್ರಮ ಕೈಗೊಳ್ಳುವುದು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಮುಕ್ಕದಲ್ಲಿ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎನ್ನಲಾಗಿದೆ.

ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.

ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

19 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

20 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

20 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

21 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

21 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

21 hours ago